ಬೆಂಗಳೂರಿನ ಕುಮಾರಕೃಪ ರಸ್ತೆಯ್ಲಲ್ಲಿ ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸಿದ ಚಿತ್ರಸಂತೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ತರಹೇವಾರಿ ಚಿತ್ರಗಳನ್ನು ಕಣ್ತುಂಬಿಕೊಂಡರು. ಪರಿಷತ್ತಿನ ಪ್ರವೇಶ ದ್ವಾರದಲ್ಲಿಯೇ ಬಾಲಕಿಯ ಬೃಹದಾಕಾರದ ಕಲಾಕೃತಿ ನಿರ್ಮಿಸಲಾಗಿತ್ತು
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಲಾಗಿತ್ತು.
22ನೇ ಚಿತ್ರಸಂತೆಯಲ್ಲಿ ಕಲಾಲೋಕವೇ ಅನಾವರಣಗೊಂಡಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರ ಸಂತೆಯಲ್ಲಿ ಭಾಗವಹಿಸಿ ಕ್ಯಾನ್ವಾಸ್ ಮೇಲೆ ಹಸ್ತಾಕ್ಷರ ಹಾಕಿದರು
ಮುಖದ ಮೇಲೆ ಬಣ್ಣದಲ್ಲಿ ಚಿತ್ರ ಬಿಡಿಸುತ್ತಿರುವ ಯುವತಿ
ಈ ಚಿತ್ರಸಂತೆಯು ಕಲಾವಿದರ ಪ್ರತಿಭೆಗೆ ವೇದಿಕೆ ಕಲ್ಪಿಸುವುದರ ಜತೆಗೆ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೂ ಅವಕಾಶ ಒದಗಿಸಿತ್ತು.
ವರ್ಣಮಯ ಕಲಾಕೃತಿಗಳು ಕಲಾರಸಿಕರ ಸಂಭ್ರಮವನ್ನೂ ಇಮ್ಮಡಿಗೊಳಿಸಿದವು.
ಚಿತ್ರಸಂತೆಯಲ್ಲಿದ್ದ ಚಿತ್ರಗಳು ಕಲಾಪ್ರೇಮಿಗಳನ್ನು ಆಕರ್ಷಿಸುತ್ತಿದ್ದವು
ಚಿತ್ರಸಂತೆಯಲ್ಲಿ ಕಂಡ ಮಹಿಳೆಯ ಕಲೆಗಳು
ಜಲವರ್ಣ, ಆ್ಯಕ್ರಿಲಿಕ್, ಮಧುಬನಿ, ತೈಲವರ್ಣ, ಡಿಜಿಟಲ್ ಪೇಂಟಿಂಗ್, ತಂಜಾವೂರು ಶೈಲಿ, ರಾಜಸ್ಥಾನಿ ಶೈಲಿ, ಕಾಫಿ ಪೇಂಟಿಂಗ್, ಮಂಡಲ ಕಲೆ, ಕಲಾಂಕಾರಿ ಕಲೆ ಗಮನ ಸೆಳೆದವು
ರಸ್ತೆಯ ಉದ್ದಕ್ಕೂ ವ್ಯಕ್ತಿಯ ಭಾವಚಿತ್ರ ಹಾಗೂ ವ್ಯಂಗ್ಯ ಚಿತ್ರಗಳನ್ನು ಬಿಡಿಸುವವರು ಕಾಣಸಿಗುತ್ತಿದ್ದರು.
ಬೆಂಗಳೂರಿನ ಕುಮಾರಕೃಪ ರಸ್ತೆಯ್ಲಲ್ಲಿ ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸಿದ ಚಿತ್ರಸಂತೆಯಲ್ಲಿ ಪ್ರದರ್ಶಿಸಿದ ಕಲಾಕೃತಿಗಳನ್ನು ಜನರು ವೀಕ್ಷಿಸಿದರು
ನಾನಾ ಪ್ರಕಾರದ ಕಲಾಕೃತಿಗಳು ಗಮನಸೆಳೆದವು. ಉಬ್ಬು ಚಿತ್ರಗಳು ಕೂಡ ಪ್ರದರ್ಶನದಲ್ಲಿ ಇದ್ದವು.
ಕಲಾಕೃತಿಗಳ ಜತೆಗೆ ಕರಕುಶಲ ವಸ್ತುಗಳು ಹಾಗೂ ಕಲಾಕೃತಿ ರಚನೆಗೆ ಅಗತ್ಯವಿರುವ ಬಣ್ಣ ಮತ್ತು ಅಗತ್ಯ ವಸ್ತುಗಳನ್ನೂ ಮಾರಾಟಕ್ಕೆ ಇರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.