ಬೆಂಗಳೂರು:ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಕ್ರೈಸ್ಟ್ ವಿಶ್ವವಿದ್ಯಾಲಯದ (ಸ್ವಾಯತ್ತ) ನೂತನ ಕುಲಪತಿಯಾಗಿ ಫಾದರ್ಡಾ.ವಿ.ಎಂ.ಅಬ್ರಹಾಂ ನೇಮಕಗೊಂಡಿದ್ದಾರೆ.
ಹತ್ತು ವರ್ಷಗಳಿಂದ ಅವರು ಸಹ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ.ಥಾಮಸ್ ಮ್ಯಾಥ್ಯೂ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಅವರನ್ನುನೇಮಿಸಲಾಗಿದೆ. ಮಾರ್ಚ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಅಬ್ರಹಾಂ ಅವರು ತಮ್ಮಪದವಿ ಶಿಕ್ಷಣವನ್ನುಬೆಂಗಳೂರಿನವಿದ್ಯಾಕ್ಷೇತ್ರಂ ಶಿಕ್ಷಣ ಸಂಸ್ಥೆಯಲ್ಲಿ ಪೂರೈಸಿದ್ದಾರೆ. ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಿಂದ ಗಣಿತಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಗಣಿತಶಾಸ್ತ್ರದ‘ಗ್ರಾಫ್ ಥಿಯರಿ’ ವಿಷಯದ ಮೇಲೆ ಸಂಶೋಧನೆ ನಡೆಸಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿಪಡೆದಿದ್ದಾರೆ. ಜಗತ್ತಿನ ಪ್ರಮುಖ ನಿಯತಕಾಲಿಕೆಗಳಲ್ಲಿ ಅವರ ಸಂಶೋಧನಾ ಲೇಖನಗಳು ಪ್ರಕಟವಾಗಿವೆ. ಶೈಕ್ಷಣಿಕ ಕಾರ್ಯಚಟುವಟಿಕೆ ಭಾಗವಾಗಿ ಜಗತ್ತಿನ ಹಲವು ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿದ್ದಾರೆ.
ಜುಲೈನಲ್ಲಿ ಅಮೆರಿಕಾದಹಾರ್ವರ್ಡ್ ಸ್ಕೂಲ್‌ನಲ್ಲಿ ನಡೆಯುವ ಕುಲಪತಿಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ
ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.