ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಹೆಸರಿರುವ 50 ಮಂದಿಯನ್ನು ಸೋಮವಾರ ವಿಚಾರಣೆಗೆ ಒಳಪಡಿಸಿದ್ದಾರೆ.
‘ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಹೆಸರಿರುವವರಿಗೆಕೆಲ ದಿನಗಳ ಹಿಂದೆಯೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕಳುಹಿಸಲಾಗಿತ್ತು. ಶನಿವಾರ ಮತ್ತು ಭಾನುವಾರ ರಜೆ ಇದ್ದಿದ್ದರಿಂದ ಯಾರೂ ಬಂದಿರಲಿಲ್ಲ. ಸೋಮವಾರ ಒಟ್ಟು 50 ಮಂದಿಯ ವಿಚಾರಣೆ ನಡೆದಿದೆ. ಈವರೆಗೂ ಒಟ್ಟು 175 ಮಂದಿ ವಿಚಾರಣೆಗೆ ಒಳಪಟ್ಟಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.