ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಬೆಂಗಳೂರು ನಗರದಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ಸಂಸದ ರಾಜೀವ್ ಗೌಡ, ಶಾಸಕಿ ಸೌಮ್ಯ ರೆಡ್ಡಿ ಮತ್ತಿತರರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಅರ್ಜಿದಾರರ ಪರ ವಕೀಲರು ಗುರುವಾರ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ಪೀಠಕ್ಕೆ ಮನವಿ ಮಾಡಿದರು. ಸಮ್ಮತಿಸಿದ ಪೀಠ ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.