ADVERTISEMENT

ಬೆಂಗಳೂರು: ಡ್ರಗ್ಸ್ ಮಾರುತ್ತಿದ್ದ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 27 ಮೇ 2022, 21:53 IST
Last Updated 27 ಮೇ 2022, 21:53 IST
   

ಬೆಂಗಳೂರು: ಸಿಟಿ ಮಾರ್ಕೆಟ್ ಠಾಣೆ ವ್ಯಾಪ್ತಿಯ ಮಟನ್ ಮಾರುಕಟ್ಟೆ ರಸ್ತೆಯಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪಿ ಸುನಿಕುಮಾರ್ ಬಿಷ್ಣೋಯಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಉತ್ತರ ಭಾರತದ ಆರೋಪಿ ಸುನಿಕುಮಾರ್, ಹೊರರಾಜ್ಯದಿಂದ ಡ್ರಗ್ಸ್ ತಂದು ನಗರದಲ್ಲಿ ಮಾರುತ್ತಿದ್ದ. ಈತನಿಂದ 90 ಗ್ರಾಂ ಎಂಡಿಎಂಎ, 33 ಗ್ರಾಂ ಬ್ರೌನ್ ಶುಗರ್, 300 ಗ್ರಾಂ ಅಫೀಮು, ₹ 7,380 ನಗದು, ಮೊಬೈಲ್ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪರಿಚಯಸ್ಥರ ಬಳಿ ಡ್ರಗ್ಸ್ ಖರೀದಿಸುತ್ತಿದ್ದ ಆರೋಪಿ, ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮಾರುತ್ತಿದ್ದ. ಈತನ ತಂಡದಲ್ಲಿ ಮತ್ತಷ್ಟು ಮಂದಿ ಇರುವ ಮಾಹಿತಿ ಇದ್ದು, ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.