ADVERTISEMENT

ಬೆಂಗಳೂರು| ಪೌರ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳಿಗೆ ಹುಡುಕಾಟ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 16:00 IST
Last Updated 10 ಅಕ್ಟೋಬರ್ 2025, 16:00 IST
   

ಬೆಂಗಳೂರು: ರಸ್ತೆ ಬದಿಯಲ್ಲಿ ಕಸ ಎಸೆಯಬೇಡಿ ಎಂದು ಹೇಳಿದ ಪೌರ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದ ಇಬ್ಬರ ಮೇಲೆ ಗೋವಿಂದರಾಜನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀನಿವಾಸ ನಗರದಲ್ಲಿ ಪೌರ ಕಾರ್ಮಿಕರೊಬ್ಬರು ರಸ್ತೆ ಸ್ವಚ್ಛಗೊಳಿಸುತ್ತಿದ್ದರು. ಆ ವೇಳೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಮಹಿಳೆ ಹಾಗೂ ಪುರುಷ ರಸ್ತೆಬದಿ ಕಸ ಎಸೆದರು. ಸ್ಥಳದಲ್ಲಿದ್ದ ಪೌರ ಕಾರ್ಮಿಕ, ‘ಇಲ್ಲಿ ಕಸ ಹಾಕಬಾರದು’ ಎಂದು ಬುದ್ಧಿಮಾತು ಹೇಳಿದ್ದರು. ಆಕ್ರೋಶಗೊಂಡ ಅವರು, ‘ನೀನು ಸುಮ್ಮನೇ ಕಸ ಗುಡಿಸು. ನಮಗೆ ಬುದ್ಧಿ ಹೇಳಬೇಡ. ನಾನು ಉನ್ನತ ಹುದ್ದೆಯಲ್ಲಿದ್ದೇನೆ. ಕೆಲಸದಿಂದ ತೆಗೆಸುತ್ತೇನೆ’ ಎಂದು ಬೆದರಿಸಿದ್ದರು. ಹೆಲ್ಮೆಟ್‌ನಿಂದ ಮೂರು ಬಾರಿ ಹಲ್ಲೆ ನಡೆಸಿದ್ದಾರೆ ಎಂದು ನಾಗೇಂದ್ರ ಆರೋಪಿಸಿದ್ದಾರೆ.

‘ಹಲ್ಲೆ ನಡೆಸಿದವರ ಪತ್ತೆಕಾರ್ಯ ನಡೆಸಲಾಗುತ್ತಿದೆ. ಹಲ್ಲೆ ನಡೆಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೃಶ್ಯಾವಳಿ ಆಧರಿಸಿ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.