ADVERTISEMENT

ಕ್ಲೇಮ್‌ ಕಮಿಷನರ್‌: ಸರ್ಕಾರದ ಪರ ಎಸಿಎಸ್‌ ಅರ್ಜಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 19:58 IST
Last Updated 18 ಆಗಸ್ಟ್ 2020, 19:58 IST

ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್‌ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್‌)ನೀಡಲಾಗಿದೆ.

ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್ ನೇಮಿಸುವ ‘ಕ್ಲೇಮ್‌ ಕಮಿಷನರ್‌’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. ದಾವೆ ನಡೆಸುವ ಮತ್ತು ಅಫಿಡವಿಟ್‌ಗೆ ಸಹಿ ಹಾಕುವ ಅಧಿಕಾರವನ್ನು ಎಡಿಜಿಪಿಗೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.