ADVERTISEMENT

ಬೆಂಗಳೂರು | ಮರಕ್ಕೆ ಬೈಕ್ ಡಿಕ್ಕಿ: ಸ್ವಚ್ಛತಾ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 14:45 IST
Last Updated 19 ಅಕ್ಟೋಬರ್ 2025, 14:45 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಕಾಡುಬೀಸನಹಳ್ಳಿ ಬಳಿಯ ಕರಿಯಮ್ಮನ ಅಗ್ರಹಾರ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರಿ ದ್ವಿಚಕ್ರ ವಾಹನವು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಯುವಕರ ಮೃತಪಟ್ಟಿದ್ದಾನೆ.

ADVERTISEMENT

ಅಸ್ಸಾಂ ರಾಜ್ಯದ ಸಾಹಿಲ್ ಅಹಮ್ಮದ್ (19) ಮೃತ ಯುವಕ.

ನಗರದ ದೇವರಬೀಸನಹಳ್ಳಿಯಲ್ಲಿ ವಾಸವಾಗಿದ್ದ ಸಾಹಿಲ್, ಖಾಸಗಿ ಕಂಪನಿಯಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ರಾತ್ರಿ ಮನೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿರ್ಲಕ್ಷ್ಯದಿಂದ ಅತಿ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಎಚ್‍ಎಎಲ್ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.