ADVERTISEMENT

ಕಡತ ವಿಲೇವಾರಿ ತ್ವರಿತಗೊಳಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 4:58 IST
Last Updated 28 ನವೆಂಬರ್ 2021, 4:58 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಉಸ್ತುವಾರಿಯಲ್ಲಿರುವ ಬೆಂಗಳೂರು ಅಭಿವೃದ್ಧಿ ಖಾತೆಗೆ ಸಂಬಂಧಿಸಿದ ಸಚಿವಾಲಯದಲ್ಲೇ ಬೃಹತ್‌ ಸಂಖ್ಯೆಯ ಕಡತಗಳು ದೀರ್ಘ ಕಾಲದಿಂದ ವಿಲೇವಾರಿಗೆ ಬಾಕಿ ಇರುವ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಸುದ್ದಿಗಾರರ ಜತೆ ಮಾತನಾಡುವಾಗ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು ಮುಖ್ಯಮಂತ್ರಿಯಾದ ತಕ್ಷಣವೇ ಕಡತ ವಿಲೇವಾರಿ ತ್ವರಿತಕ್ಕೆ ಸೂಚನೆ ನೀಡಿದ್ದೆ’ ಎಂದರು.

ಕಾನೂನು ಮತ್ತು ತಾಂತ್ರಿಕ ತೊಡಕುಗಳ ಕಾರಣದಿಂದ ಕೆಲವು ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ವಿಳಂಬ ಆಗಿದೆ. ಅಂತಹ ಸಮಸ್ಯೆಗಳನ್ನೂ ಪರಿಹರಿಸಿಕೊಂಡು ತ್ವರಿತವಾಗಿ ಕಡತಗಳನ್ನು ವಿಲೇವಾರಿ ಮಾಡುವಂತೆ ಪುನಃ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.