ADVERTISEMENT

‘ಪ್ಯಾರಾ ಸೈಕ್ಲಿಂಗ್‌’ಗೆ ಮುಖ್ಯಮಂತ್ರಿ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2020, 21:04 IST
Last Updated 27 ಡಿಸೆಂಬರ್ 2020, 21:04 IST
'ಪ್ಯಾರಾ ಸೈಕ್ಲಿಂಗ್-2020’ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದ್ದರು                     -ಪ್ರಜಾವಾಣಿ ಚಿತ್ರ
'ಪ್ಯಾರಾ ಸೈಕ್ಲಿಂಗ್-2020’ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದ್ದರು                     -ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ‘ಪ್ಯಾರಾ ಸೈಕ್ಲಿಂಗ್’ ಮೂಲಕ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಿಧಾನಸೌಧದ ಪೂರ್ವದ್ವಾರದ ಬಳಿ ‘ಪ್ಯಾರಾ ಸೈಕ್ಲಿಂಗ್-2020’ (ಸೈಕಲ್ ಯಾತ್ರೆ) ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಆತ್ಮವಿಶ್ವಾಸದಿಂದ ದೇಶದ ಉದ್ದಗಲಕ್ಕೂ ಸಂಚರಿಸಿ ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವ ಸಂದೇಶವನ್ನು ಈ ಯಾತ್ರೆ ರವಾನಿಸಲಿದೆ ಸೈಕ್ಲಿಂಗ್‌ ಯಾತ್ರೆ ಯಶಸ್ವಿಯಾಗಲಿ’ ಎಂದು ಹಾರೈಸಿದರು.

ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಸಹಯೋಗದಲ್ಲಿ ಹೈದರಾಬಾದ್‌ನ ಆದಿತ್ಯ ಮೆಹ್ತಾ ಫೌಂಡೇಶನ್‌ ಅಂಗವಿಕಲ ಪ್ರತಿಭೆಗಳನ್ನು ಉತ್ತೇಜಿಸಲು ನಿಧಿ ಸಂಗ್ರಹಿಸುವ ಉದ್ದೇಶದಿಂದ ಈ ಸೈಕಲ್ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.