ADVERTISEMENT

ಸಿಎಂ ಬೊಮ್ಮಾಯಿ ನಾಳೆ ದೆಹಲಿಗೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2022, 17:53 IST
Last Updated 27 ಏಪ್ರಿಲ್ 2022, 17:53 IST

ಬೆಂಗಳೂರು: ದೇಶದ ಎಲ್ಲ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಮತ್ತು ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ದೆಹಲಿಗೆ ತೆರಳುವರು.

ಶನಿವಾರ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿಯವರು ಶುಕ್ರವಾರ ರಾತ್ರಿಯೇ ದೆಹಲಿಗೆ ತೆರಳುವರು. ಶನಿವಾರ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು. ಅವರು ದೆಹಲಿಯಿಂದ ವಾಪಸಾಗುವ ಸಮಯ ಇನ್ನೂ ನಿಗದಿಯಾಗಿಲ್ಲ ಎಂದು ಅವರ ಸಚಿವಾಲಯದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT