ADVERTISEMENT

ನೀರಿನ ಸುಸ್ಥಿರ ನಿರ್ವಹಣೆ: ರಾಜೇಂದ್ರ ಸಿಂಗ್‌ ಚರ್ಚೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2018, 19:49 IST
Last Updated 18 ನವೆಂಬರ್ 2018, 19:49 IST
ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ರಾಜೇಂದ್ರ ಸಿಂಗ್‌ ಜಲ ಸಾಕ್ಷರತೆಯ ಕೃತಿ ನೀಡಿದರು.
ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ರಾಜೇಂದ್ರ ಸಿಂಗ್‌ ಜಲ ಸಾಕ್ಷರತೆಯ ಕೃತಿ ನೀಡಿದರು.   

ಬೆಂಗಳೂರು: ಜಲತಜ್ಞ ರಾಜೇಂದ್ರ ಸಿಂಗ್ ಮತ್ತು ತಂಡದವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭಾನುವಾರ ಭೇಟಿಯಾಗಿ ನೀರಿನ ಸುಸ್ಥಿರ ನಿರ್ವಹಣೆ ಕುರಿತು ಚರ್ಚಿಸಿದರು.

‘ಸತತ ಬರಗಾಲ ಎದುರಿಸುತ್ತಿರುವ ರಾಜ್ಯದಲ್ಲಿ ಸುಸ್ಥಿರ ಜಲ ನಿರ್ವಹಣೆಗೆ ಒತ್ತು ನೀಡುವ ಅಗತ್ಯವಿದೆ. ರೈತರು, ವಿದ್ಯಾರ್ಥಿಗಳು, ಕೈಗಾರಿಕೋದ್ಯಮಿಗಳು ಮತ್ತು ಇತರರು ಜಲ ಸಾಕ್ಷರರಾಗುವ ಅಗತ್ಯವಿದೆ’ ಎಂದು ರಾಜೇಂದ್ರ ಸಿಂಗ್‌ ಪ್ರತಿಪಾದಿಸಿದರು.

‘ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು ಜಲ ಸಂಪನ್ಮೂಲದ ವೈಜ್ಞಾನಿಕ ಬಳಕೆ ಸರ್ಕಾರದ ಆದ್ಯತೆಯಾಗಿದೆ. ಜಲ ಸಾಕ್ಷರತೆ ಕಾರ್ಯಕ್ರಮಕ್ಕೆ ಸಕಾರಾತ್ಮಕವಾಗಿ ಚಿಂತನೆ ನಡೆಸಿದ್ದೇವೆ’ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.