ಸಿದ್ದರಾಮಯ್ಯ
ಬೆಂಗಳೂರು: 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ 219 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
ರಾಜ್ಯದ ವಿವಿಧ ಘಟಕಗಳಲ್ಲಿ ಕೆಲಸ ಮಾಡುತ್ತಿರುವ 197 ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಅಲ್ಲದೇ ನಕ್ಸಲ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ 22 ಮಂದಿಯ ತಂಡವನ್ನೂ ಈ ಪದಕಕ್ಕೆ ಆಯ್ಕೆ ಮಾಡಲಾಗಿದೆ.
ರಾಜ್ಯದ ಹಾಗೂ ನೆರೆ ರಾಜ್ಯದ ನಕ್ಸಲರು ಶರಣಾಗಿ ಮುಖ್ಯವಾಹಿನಿಗೆ ಬರುವಲ್ಲಿ ರಾಜ್ಯ ಗುಪ್ತಚರ ಘಟಕ ಹಾಗೂ ನಕ್ಸಲ್ ನಿಗ್ರಹ ಪಡೆಯ ಅಧಿಕಾರಿ, ಸಿಬ್ಬಂದಿಯ ಪಾತ್ರ ಗಮನಾರ್ಹವಾಗಿತ್ತು. ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರು ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.