ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಮತ್ತು ಜಾತಿವಾರು ಉಪ ಮುಖ್ಯಮಂತ್ರಿಗಳನ್ನು ಮಾಡಬೇಕೆಂಬ ಚರ್ಚೆ ಕಾಂಗ್ರೆಸ್‌ನಲ್ಲಿ ಮತ್ತಷ್ಟು ಜೋರಾಗಿದೆ. ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ಬೇಡಿಕೆಯನ್ನು ಕೆಲವರು ಸಮರ್ಥಿಸಿಕೊಂಡಿದ್ದರೆ, ಹಲವರು ಕಟುವಾಗಿ ಟೀಕಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕೆಂಬ ಸ್ವಾಮೀಜಿಯ ಬೇಡಿಕೆಯನ್ನು ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಸಮರ್ಥಿಸಿಕೊಂಡಿದ್ದಾರೆ. ಆದರೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಸೇರಿದಂತೆ ಕೆಲವರು ಸ್ವಾಮೀಜಿ ಹೇಳಿಕೆಯನ್ನು ವಿರೋಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.