ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರಿ ನೌಕರರು ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕ೦ತೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಲಾಗಿದ್ದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ ಜಾರಿಗೊಳಿಸಿದ್ದಕ್ಕಾಗಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಬುಧವಾರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಹೊಸ ಪಿಂಚಣಿ ವ್ಯವಸ್ಥೆ ರದ್ದು ಮಾಡಿ ಹಳೆ ವ್ಯವಸ್ಥೆ ಜಾರಿಗೊಳಿಸುವ ಕುರಿತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿಸಮಿತಿಯನ್ನು ಈಗಾಗಲೇ ರಚಿಸಲಾಗಿದೆ. ಒಪಿಎಸ್ ಮರು ಜಾರಿಗೊಳಿಸಿದ ರಾಜ್ಯಗಳಿಗೆ ಸಮಿತಿ ಭೇಟಿ ನೀಡಿ ಪರಿಶೀಲಿಸುತ್ತಿದೆ. ವರದಿ ನೀಡಿದ ನಂತರ ಒಪಿಎಸ್ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಇರುವ ತಾಂತ್ರಿಕ ತೊಡಕುಗಳನ್ನು ಶೀಘ್ರ ನಿವಾರಿಸಲಾಗುವುದು ಎಂದು ಭರವಸೆ ನೀಡಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.