ಶಬಾನಾ ಆಜ್ಮಿ
ಬೆಂಗಳೂರು: ನಗರದಲ್ಲಿ ಆಯೋಜಿಸಿರುವ 16ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆಗೆ ಆಯ್ಕೆಯಾಗಿರುವ ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಬೆಂಗಳೂರಿನಲ್ಲಿ ಆಯೋಜಿಸಿರುವ 16ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.
70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.