ಸಿದ್ದರಾಮಯ್ಯ , ಮುಖ್ಯಮಂತ್ರಿ
ಬೆಂಗಳೂರು: ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರಕ್ಕೆ (ಬಿಎಂಎಲ್‌ಟಿಎ) ಪುನಶ್ಚೇತನ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಪ್ರಾಧಿಕಾರಕ್ಕೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸದಸ್ಯರು, ಅಧಿಕಾರೇತರ ಸದಸ್ಯರನ್ನು ನೇಮಿಸಿದೆ.
ಬೆಂಗಳೂರು ಅಭಿವೃದ್ಧಿ ಸಚಿವರು ಹಾಗೂ ಸಾರಿಗೆ ಸಚಿವರು ಪದನಿಮಿತ್ತ ಉಪಾಧ್ಯಕ್ಷ, ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತರು ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಿ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಾರಿಗೆ ಇಲಾಖೆ, ಲೋಕೋಪಯೋಗಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ನಗರ ಪಾಲಿಕೆಗಳ ಮೇಯರ್‌ಗಳು, ನಗರ ಪೊಲೀಷ್ ಕಮಿಷನರ್, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ, ಜಿಬಿಎ ಮುಖ್ಯ ಆಯುಕ್ತ, ನಗರ ಪಾಲಿಕೆಗಳ ಆಯುಕ್ತರು, ಜಿಬಿಎ ಮುಖ್ಯ ನಗರ ಯೋಜಕ, ನಗರ ಪಾಲಿಕೆಗಳ ಹೆಚ್ಚುವರಿ ಮುಖ್ಯ ನಗರ ಯೋಜಕರು, ಬಿಡಿಎ ಆಯುಕ್ತ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ನಿರ್ದೇಶಕ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ, ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ, ಬೆಂಗಳೂರು ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಉದ್ಯಮಗಳ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪದನಿಮಿತ್ತ ಸದಸ್ಯರಾಗಿದ್ದಾರೆ.
ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ, ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಶೇಷ ಆಹ್ವಾನಿತರಾಗಿದ್ದಾರೆ.
ಐಐಎಸ್ಸಿಯ ಪ್ರೊ. ಅಬ್ದುಲ್ ಆರ್. ಪಿಂಜಾರಿ, ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಉಮಾಶಂಕರ್, ಐ.ಎಸ್.ಎನ್. ಪ್ರಸಾದ್, ಪ್ರೆಸ್ಟೀಜ್ ಫೌಂಡೇಷನ್‌ನ ಇರ್ಫಾನ್ ರಜಾಕ್, ವರ್ಲ್ಡ್ ರಿಸೋರ್ಸ್ ಇನ್‌ಸ್ಟಿಟ್ಯೂಟ್‌ನ ಪವರನ್ ಮುಲುಕುಟಿಯ, ಹೊರ ವರ್ತುಲ ರಸ್ತೆಯ ಕಂಪನಿಗಳ ಸಂಘದ ಅಧ್ಯಕ್ಷ ಮಾನಸ್‌ದಾಸ್, ಇಂಡಿಯನ್ ಅರ್ಬನ್‌ನ ಉಪಾಧ್ಯಕ್ಷ ಜಗದೀಶ್ ಚಂದ್ರ ಶರ್ಮಾ, ಆರ್ಕಿಟೆಕ್ಟ್ ಅಭಯ್ ಝಕ್ರಿಯ, ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಪ್ರೊ. ಜಯ ಆರ್. ಶಿಂಗನಮಕ್ಕಿ, ಆರ್.ವಿ. ಎಂಜಿನಿಯರಿಂಗ್ ಕಾಲೇಜಿನ ಪ್ರೊ. ಆಂಜನೇಯಪ್ಪ ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.