ADVERTISEMENT

ಮುಂದುವರಿದ ಟೆಂಪಲ್‌ ರನ್‌: ತಮಿಳುನಾಡಿನ ದೇವಾಲಯದಲ್ಲಿ ಎಚ್‌ಡಿಕೆ ಪೂಜೆ

​ಪ್ರಜಾವಾಣಿ ವಾರ್ತೆ
Published 7 ಮೇ 2019, 19:09 IST
Last Updated 7 ಮೇ 2019, 19:09 IST
   

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಟೆಂಪಲ್‌ ರನ್‌ ಮುಂದುವರಿದಿದ್ದು, ಮಂಗಳವಾರ ತಮಿಳುನಾಡಿನ ತಿರುಚಂಡೂರಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದರು.

ಲೋಕಸಭಾ ಚುನಾವಣೆಯಲ್ಲಿ ಪುತ್ರನ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಧರ್ಮಸ್ಥಳ, ಶೃಂಗೇರಿ, ಕೊಪ್ಪ ಮುಂತಾದ ಕಡೆಗಳಲ್ಲಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ತಮಿಳುನಾಡಿನ ತಿರುಚಂಡೂರಿಗೂ ಭೇಟಿ ನೀಡುವ ಹರಕೆ ಹೊತ್ತಿದ್ದರು.

ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್‌ ಜತೆಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.