ADVERTISEMENT

ಎರಡು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಇಬ್ರಾಹಿಂ ಹೆಸರು!

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2018, 20:13 IST
Last Updated 31 ಆಗಸ್ಟ್ 2018, 20:13 IST
ಸಿ.ಎಂ.ಇಬ್ರಾಹಿಂ
ಸಿ.ಎಂ.ಇಬ್ರಾಹಿಂ   

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದಾರೆ ಎಂದು ಬಿಬಿಎಂಪಿ ವಿರೋಧಪಕ್ಷದ ನಾಯಕ ಪದ್ಮನಾಭ ರೆಡ್ಡಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಇದು ಕಾನೂನಿನ ಉಲ್ಲಂಘನೆಯಾಗಿದ್ದು, ಇಬ್ರಾಹಿಂ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಲು ಇಬ್ರಾಹಿಂ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದರು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದ್ದು, ಗುರುತಿನ ಚೀಟಿಯನ್ನೂ ಹೊಂದಿದ್ದಾರೆ. ಅಲ್ಲದೆ,ಬೆಂಗಳೂರು ಜಿಲ್ಲೆಯ ಶಿವಾಜಿನಗರ ಕ್ಷೇತ್ರದಲ್ಲೂ ಗುರುತಿನ ಚೀಟಿ ಹೊಂದಿದ್ದಾರೆ. ಇದು ಕಾನೂನು ಬಾಹಿರ ಎಂದು ಅವರುದಾಖಲೆಗಳ ಸಮೇತ ದೂರು ನೀಡಿದರು.

ADVERTISEMENT

ಬಿಬಿಎಂಪಿ ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಯಲ್ಲಿ ಮತದಾನ ಮಾಡುವ ಉದ್ದೇಶದಿಂದಲೇ ಬೆಂಗಳೂರಿನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಿದ್ದಾರೆ. ಇದು ಕರ್ನಾಟಕ ಮುನ್ಸಿಪಲ್‌ ಕಾರ್ಪೊರೇಷನ್‌ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿವರಿಸಿದ್ದಾರೆ.ಈ ಬಗ್ಗೆ ತನಿಖೆ ನಡೆಸ ಬೇಕು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.