ಬೆಂಗಳೂರು: ನಗರದ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು 2024-25ನೇ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಎಂಜಿನಿಯರಿಂಗ್ ವಿಭಾಗಗಳಲ್ಲಿ 6 ರ್‍ಯಾಂಕ್‌ಗಳನ್ನು ಪಡೆದಿದ್ದಾರೆ.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾಸೈನ್ಸ್ ವಿಭಾಗದಲ್ಲಿ ಕೀರ್ತಿ ಎ. ರೆಡ್ಡಿ ಮತ್ತು ಪ್ರಿಯಾಂಕಾ ಜಿ.ಎಸ್. ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ರ‍್ಯಾಂಕ್ ಪಡೆದರು. ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕೀರ್ತಿ ಸುರೇಖಾ ನಾಲ್ಕನೇ ರ‍್ಯಾಂಕ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಮದೀಹಾ ಹಮೀದ್ ಆರನೇ ರ‍್ಯಾಂಕ್ ಮೆಕ್ಯಾನಿಕಲ್ ವಿಭಾಗದಲ್ಲಿ ಅಭಿನವ್ ರಮೇಶ್ ಎಂಟನೇ ರ‍್ಯಾಂಕ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಿಷನ್ ಲರ್ನಿಂಗ್ ಎಂಜಿನಿಯರಿಂಗ್‌ನಲ್ಲಿ ನೇತ್ರಾ ನಾಯರ್ ಒಂಬತ್ತನೇ ರ‍್ಯಾಂಕ್ ಗಳಿಸಿದ್ದಾರೆ.
10ರ ಒಳಗೆ ರ‍್ಯಾಂಕ್ ಪಡೆದಿರುವ ಆರು ವಿದ್ಯಾರ್ಥಿಗಳು ಶುಕ್ರವಾರ ಬೆಳಗಾವಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕಗಳನ್ನು ಪಡೆದರು ಎಂದು ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಸಂಜಯ್ ಜೈನ್, ಉಪ ಪ್ರಾಂಶುಪಾಲ ಬಿ.ನರಸಿಂಹ ಮೂರ್ತಿ ತಿಳಿಸಿದ್ದಾರೆ.
Highlights - null
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.