
ಪ್ರಜಾವಾಣಿ ವಾರ್ತೆ
ಬೆಂಗಳೂರು: ಸಿಎಂಆರ್ ವಿಶ್ವವಿದ್ಯಾಲಯದ 10ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಬಾಗಲೂರಿನಲ್ಲಿರುವ ಲೇಕ್ ಸೈಡ್ ಕ್ಯಾಂಪಸ್ ಸಭಾಂಗಣದಲ್ಲಿ ಫೆ.7ರಂದು ನಡೆಯಲಿದೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಪದವಿ ಪ್ರದಾನ ಮಾಡಲಿದ್ದಾರೆ. ಅರವಿಂದ್ ಕನ್ಸಲ್ಟೆನ್ಸಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ್ ಕೇಸ್ಕರ್ ಅವರು ಘಟಿಕೋತ್ಸವದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಸುರತ್ಕಲ್‌ನ ಎನ್.ಐ.ಟಿ.ಕೆ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ, ವಿಶ್ರಾಂತ ಕುಲಪತಿ ಕೆ. ಬಾಲವೀರ ರೆಡ್ಡಿ ಮತ್ತು ಗಾಯಕಿ ಸಂಗೀತಾ ಕಟ್ಟಿ ಕುಲಕರ್ಣಿ ಅವರಿಗೆ ಸಿಎಂಆರ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ.
ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಸಿಎಂಆರ್ ವಿಶ್ವವಿದ್ಯಾಲಯದ ಅಧ್ಯಕ್ಷ ಕೆ.ಸಿ ರಾಮಮೂರ್ತಿ, ಕುಲಾಧಿಪತಿ ಸಬಿತಾ ರಾಮಮೂರ್ತಿ ಭಾಗವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.