ADVERTISEMENT

ಮಾರ್ಚ್‌ ಮೊದಲ ವಾರದಲ್ಲಿ ಕಾಫಿ ದರ ಏರಿಕೆ: ಪಿ.ಸಿ. ರಾವ್

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2025, 15:48 IST
Last Updated 18 ಫೆಬ್ರುವರಿ 2025, 15:48 IST
<div class="paragraphs"><p>ಕಾಫಿ</p></div>

ಕಾಫಿ

   

ಬೆಂಗಳೂರು: ‘ಕಾಫಿ ಪುಡಿಯ ದರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ಮಾರ್ಚ್‌ ಮೊದಲ ವಾರದಲ್ಲಿ ಬೆಂಗಳೂರಿನ ಎಲ್ಲ ಹೋಟೆಲ್‌ಗಳಲ್ಲಿ ಕಾಫಿ ದರವನ್ನು ಶೇಕಡ 10ರಿಂದ 15ರವರೆಗೆ ಏರಿಕೆ ಮಾಡಲಾಗುವುದು’ ಎಂದು ಬೃಹತ್‌ ಬೆಂಗಳೂರು ಹೋಟೆಲುಗಳ ಸಂಘದ ಗೌರವ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ.

‘ಬೆಂಗಳೂರು ನಗರದಲ್ಲಿ ಉತ್ತಮ ಗುಣಮಟ್ಟದ ಫಿಲ್ಟರ್‌ ಕಾಫಿ ಗ್ರಾಹಕರ ಕೈಗೆಟಕುವ ದರದಲ್ಲಿ ಸಿಗುತ್ತದೆ. ಇತ್ತೀಚೆಗೆ ಕಾಫಿ ಪುಡಿಯ ದರ ಏರಿಕೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಹಾಲಿನ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆ ಇದೆ. ಆದ್ದರಿಂದ ಬೆಂಗಳೂರು ನಗರದಲ್ಲಿರುವ ಹೋಟೆಲ್‌ಗಳಲ್ಲಿ ಕಾಫಿಯ ಬೆಲೆಯನ್ನು ಹೆಚ್ಚಿಸುವುದು ಅನಿವಾರ್ಯ ಆಗಲಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.