ADVERTISEMENT

ಬೆಂಗಳೂರು ನಗರದಲ್ಲಿ ಚಳಿ ವಾತಾವರಣ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2023, 16:22 IST
Last Updated 5 ಡಿಸೆಂಬರ್ 2023, 16:22 IST
<div class="paragraphs"><p>&nbsp;ಬೆಂಗಳೂರು</p></div>

 ಬೆಂಗಳೂರು

   

ಬೆಂಗಳೂರು: ‘ಮಿಚಾಂಗ್’ ಚಂಡಮಾರುತದ ಪರಿಣಾಮ ನಗರದಲ್ಲಿ ಗರಿಷ್ಠ ಉಷ್ಣಾಂಶ ತಗ್ಗಿದೆ.

ಮಂಗಳವಾರ ಮೋಡ ಕವಿದ ವಾತಾವರಣವಿತ್ತು. ಹವಾಮಾನ ಇಲಾಖೆಯ ಪ್ರಕಾರ ಗರಿಷ್ಠ ಉಷ್ಣಾಂಶ 23.6 ಡಿಗ್ರಿ ಸೆಲ್ಸಿಯಸ್‌ಗೆ ಇಳಿದರೆ, ಕನಿಷ್ಠ ಉಷ್ಣಾಂಶ 19.4 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು. ಮುಂಜಾನೆ ಹಾಗೂ ಸಂಜೆ ಅವಧಿಯಲ್ಲಿ ಉಷ್ಣಾಂಶ ಮತ್ತಷ್ಟು ತಗ್ಗುತ್ತಿರುವ ಪರಿಣಾಮ ಈ ಅವಧಿಯಲ್ಲಿ ಚಳಿ ಹೆಚ್ಚುತ್ತಿದೆ. 

ADVERTISEMENT

ಸಂಜೆ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇದ್ದರೆ, ಮುಂಜಾನೆ ಅವಧಿಯಲ್ಲಿ ಮಂಜು ಮುಸುಕುತ್ತಿದೆ.‌ ರಾತ್ರಿಯಲ್ಲೂ ತಾಪಮಾನ ಮತ್ತಷ್ಟು ಕಡಿಮೆಯಾಗಿ, ಥಂಡಿ ಅನುಭವವಾಗುತ್ತಿದೆ. ಹೀಗಾಗಿ, ಕೆಲ ದಿನಗಳಿಂದ ನಗರದಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶದಲ್ಲಿ ಏರಿಳಿತವಾಗುತ್ತಿದೆ.  

ವಾರದಿಂದ ಗರಿಷ್ಠ ಉಷ್ಣಾಂಶ ಸರಾಸರಿ 27 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಮೋಡ ಕವಿದ ವಾತಾವರಣ ಸಹಿತ ಆಗಾಗ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ತಾಪಮಾನ ಕುಸಿಯುತ್ತಿದೆ. 

ನಗರದಲ್ಲಿ ಮುಂದಿನ ಒಂದು ವಾರ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಆಸುಪಾಸು ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.