ADVERTISEMENT

ಸಿಇಟಿ: ಕಾಲೇಜು ಪ್ರವೇಶಕ್ಕೆ 7ರವರೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2022, 20:34 IST
Last Updated 4 ನವೆಂಬರ್ 2022, 20:34 IST
   

ಬೆಂಗಳೂರು: ಮೊದಲ ಸುತ್ತಿನಲ್ಲಿ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸೀಟು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿ ಗಳು ಕಾಲೇಜಿಗೆ ಪ್ರವೇಶ ಪಡೆಯಲು ನ.7ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸೀಟು ಹಂಚಿಕೆಯಾದ ಅಭ್ಯರ್ಥಿ ಗಳು ನಾಲ್ಕು ಆಯ್ಕೆಗಳಲ್ಲಿ ಸೂಕ್ತವಾದ ಕೋರ್ಸ್‌, ಕಾಲೇಜು ಆಯ್ಕೆ ಮಾಡಿಕೊಳ್ಳಲು ನ.6ರವರೆಗೆ ಸಮಯ ನಿಗದಿಪಡಿಸಲಾಗಿದೆ. ಆಯ್ಕೆಯ ನಂತರ ಶುಲ್ಕ ಪಾವತಿಸಲು, ಪ್ರವೇಶಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ನ.7 ರವರೆಗೆ ಅವಕಾಶವಿದೆ.

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ನೈಜಸೀಟು ಹಂಚಿಕೆಯನ್ನು ನ.11ರಂದು ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ಇಚ್ಛೆ ಆಯ್ಕೆ ದಾಖಲಿಸಲು ನ.6ರವರೆಗೆ ಸಮಯ ನೀಡಲಾಗಿದೆ. 7ರಂದು ಅಣಕು ಸೀಟು ಹಂಚಿಕೆ ಪ್ರಕಟಿಸಲಾಗುವುದು. ಆ ದಿನವೇ ಆಯ್ಕೆಗಳನ್ನು ಬದಲಿಸಬಹುದು ಎಂದು ಕೆಇಎ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.