ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಎಸ್‍ಡಿಪಿಐ ಕಾರ್ಯಕರ್ತ ಖಾಲೀದ್ ಮುಜಾಮಿಲ್‍ನನ್ನು ಡಿ.ಜೆ.ಹಳ್ಳಿ ಪೊಲೀಸರುಬುಧವಾರ ತಡರಾತ್ರಿ ಬಂಧಿಸಿದರು.
ಡಿ.ಜೆ.ಹಳ್ಳಿಯ ರೋಷನ್ ನಗರದ ನಿವಾಸಿಯಾಗಿದ್ದ ಖಾಲೀದ್, ಅಯಾಜ್ ಹಾಗೂ ಆಪ್ನಾನ್ ಜೊತೆಗೂಡಿ ಎಸ್‍ಡಿಪಿಐ ಕಾರ್ಯಕರ್ತರನ್ನು ಒಗ್ಗೂಡಿಸಿದ್ದ ಎಂದು ಆರೋಪಿಸಲಾಗಿದೆ.ಜೆಡಿಎಸ್ ಮುಖಂಡ ವಾಜಿದ್ ಜೊತೆಗೆ ಖಾಲೀದ್ ಸಂಪರ್ಕದಲ್ಲಿದ್ದ. ಹಲವು ರಾಜಕೀಯ ನಾಯಕರ ಜೊತೆಗೂ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಗಲಭೆ ನಡೆಸಲು ಕಿಡಿಗೇಡಿಗಳಿಗೆ ಪ್ರಚೋದನೆ ಹಾಗೂ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿ, ಸಾರ್ವಜನಿಕರಿಗೆ ಬೆದರಿಕೆ ಹಾಕಿರುವ ಆರೋಪದಡಿ ಮುಕ್ಬುಲ್‍ನನ್ನು ಡಿ.ಜೆ.ಹಳ್ಳಿ ಪೊಲೀಸರು ಗುರುವಾರ ಬಂಧಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.