ಬೆಂಗಳೂರು: ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ವೇಳೆ ಧರ್ಮದ ಕಾಲಂನಲ್ಲಿ ‘ಹಿಂದೂ’ ಹಾಗೂ ಜಾತಿಯ ಕಾಲಂನಲ್ಲಿ ‘ಗಾಣಿಗ’ ಎಂದೇ ನಮೂದಿಸಬೇಕು ಎಂದು ಅಖಿಲ ಕರ್ನಾಟಕ ಗಾಣಿಗರ ಸಂಘ ತಿಳಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಆರ್. ರಾಜಶೇಖರ್, ‘ಉಪ ಜಾತಿಯ ಕಾಲಂನಲ್ಲಿ ಶಿವಜ್ಯೋತಿಪಣ ಗಾಣಿಗ, ಜ್ಯೋತಿನಗರ, ದೇವ ಗಾಣಿಗ/ಒಂಟೆತ್ತು ಗಾಣಿಗ, ಸೋಮಕ್ಷತ್ರಿಯ, ಪಾಟಾಳಿ, ಜ್ಯೋತಿನಗರ ವೈಶ್ಯ, ಜ್ಯೋತಿಪಣ ಗಾಣಿಗ, ಗಾಂಡ್ಲಾ, ವನಿಯನ್/ ವಾಣಿಯರ್, ವಾಣಿವೈಶ್ಯ, ಸಪಲಿಗ, ಸಾಪಲ್ಯ, ತೇಲಿ, ತಿಲ್ವಾರ್ ತೇಲಿ ಎಂದೇ ಬರೆಯಿಸಬೇಕು. ಇದು ಒಳ ಮೀಸಲಾತಿ ಹಂಚಿಕೆ ಮಾಡುವ ಸಂದರ್ಭದಲ್ಲಿ ಸಮುದಾಯಕ್ಕೆ ಅನುಕೂಲವಾಗಲಿದೆ’ ಎಂದು ಮಾಹಿತಿ ನೀಡಿದರು.
‘ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ನಮ್ಮ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.