ADVERTISEMENT

ರಸಪ್ರಶ್ನೆ ಸ್ಪರ್ಧೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 20:22 IST
Last Updated 16 ಜೂನ್ 2020, 20:22 IST

ಬೆಂಗಳೂರು: ವಿಶ್ವ ತಂಬಾಕುರಹಿತ ದಿನದ ಪ್ರಯುಕ್ತ ರಾಜ್ಯ ತಂಬಾಕು ನಿಯಂತ್ರಣ ಘಟಕ ಆಯೋಜಿಸಿರುವ ಆನ್‌ಲೈನ್‌ ರಸಪ್ರಶ್ನೆ ಸ್ಪರ್ಧೆಗೆ ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಚಾಲನೆ ನೀಡಿದರು.

ನಗರದಲ್ಲಿ ಮಂಗಳವಾರ ನಡೆದಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ತಂಬಾಕು ನಿಯಂತ್ರಣ ಕಾರ್ಯಕ್ರಮ ಹಾಗೂ ತಂಬಾಕು ಮತ್ತು ಪಾನ್ ಮಸಾಲದ ಬಳಕೆಯ ದುಷ್ಪರಿಣಾಮದ ಬಗ್ಗೆ ಪ್ರತಿನಿತ್ಯ 15 ಪ್ರಶ್ನೆಗಳನ್ನು ಕೇಳಲಾಗುತ್ತದೆ. ತಂಬಾಕು ಉತ್ಪನ್ನಗಳ ವ್ಯಾಮೋಹದಿಂದ ಯುವಜನತೆ ಹೊರಬರಬೇಕು’ ಎಂದು ತಿಳಿಸಿದರು.

‘ಸ್ಪರ್ಧೆಯಲ್ಲಿ ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ‍ಪ್ರಥಮ ಸ್ಥಾನಪಡೆದವರಿಗೆ ₹ 10 ಸಾವಿರ ನಗದು ಬಹು
ಮಾನ, ದ್ವಿತೀಯ ಸ್ಥಾನ ಪಡೆದವರಿಗೆ ₹ 8 ಸಾವಿರ ನಗದು ಬಹುಮಾನ ನೀಡಲಾಗುತ್ತದೆ’ ಎಂದರು. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು
ಹಾಗೂ ಹೆಸರು ನೋಂದಾಯಿ ಸಲು:http://3.6.207.70/ntcp/

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.