ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಬಗ್ಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಅಸಂಸದೀಯ ಪದ ಬಳಸಿ ಮಾತನಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸದಸ್ಯರು, ವಿಧಾನಸೌಧ ಠಾಣೆಗೆ ಬುಧವಾರ ದೂರು ನೀಡಿದ್ಧಾರೆ.
ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
‘ವಿಧಾನಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ರವಿಕುಮಾರ್ ಅವರು ಲಘುವಾಗಿ ಮಾತನಾಡಿದ್ದಾರೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಮನೋಹರ್ ಅವರು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.