ದಿನೇಶ್ ಗುಂಡೂರಾವ್
ವಿಜಯಪುರ: ‘ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಬಗ್ಗೆ ಅಲ್ಲದೇ ಅವುಗಳ ಕಾರ್ಯಕರ್ತರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡುವುದರ ಜೊತೆಗೆ ಹೇಳಿಕೆಯೂ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಜಯಪುರದ ಆಶ್ರಮ ಬಡಾವಣೆ ನಿವಾಸಿ ಪ್ರಕಾಶ ಚವ್ಹಾಣ ಎಂಬುವರು ಸೋಮವಾರ ಗಾಂಧಿ ಚೌಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
‘ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ’ ಎಂಬ ಶಾಸಕ ಯತ್ನಾಳ
ಅವರ ಹೇಳಿಕೆ ವಿರುದ್ಧ ಗುಂಡೂರಾವ್ ಪತ್ನಿ ಟಬು ರಾವ್ ದೂರು ದಾಖಲಿಸಿದ ಬೆನ್ನಲ್ಲೇ, ಶಾಸಕ ಯತ್ನಾಳ ಕಡೆಯವರು ಪ್ರತಿದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.