ಮೋದಿ ವಿರುದ್ಧದ ದೂರು ವಜಾ
ಬೆಂಗಳೂರು: ರಾಜಸ್ಥಾನದಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚಲಾಗುತ್ತದೆ ಎಂಬ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಮೋದಿ ವಿರುದ್ಧ ಸಲ್ಲಿಸಲಾಗಿದ್ದ ಖಾಸಗಿ ದೂರೊಂದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.
ಈ ಕುರಿತಂತೆ ಜಿಯಾ ಉರ್ ರಹಮಾನ್ ನೂಮಾನಿ ಸಲ್ಲಿಸಿದ್ದ ಖಾಸಗಿ ದೂರನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್, ‘ಸಿಆರ್‌ಪಿಸಿ 156(3)ರ ಅಡಿಯಲ್ಲಿ ಈ ಅರ್ಜಿಯನ್ನು ತನಿಖೆಗೆ ಒಪ್ಪಿಸಲು ಯೋಗ್ಯವಾಗಿಲ್ಲ’ ಎಂಬ ಅಭಿಪ್ರಾಯದೊಂದಿಗೆ ವಜಾಗೊಳಿಸಿ ಆದೇಶಿಸಿದ್ದಾರೆ.
‘ಮೋದಿ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 153ಎ, 153ಬಿ, 295ಎ, 503, 504, 505 ಮತ್ತು 505(2) ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.