ಬೆಂಗಳೂರು: ನಟ ರಕ್ಷಕ್ ‘ಬುಲೆಟ್’ ಅವರು ಚಾಮುಂಡೇಶ್ವರಿ ದೇವಿಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ, ಹಿಂದೂ ಸಂಘಟನೆ ಕಾರ್ಯಕರ್ತ ಬಿ.ಎಸ್.ಮಹೇಶ್ ಅವರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರಿಗೆ ಬುಧವಾರ ದೂರು ನೀಡಿದ್ದಾರೆ.
‘ವಾಹಿನಿಯೊಂದರಲ್ಲಿ ಪ್ರಸಾರ ಆಗುತ್ತಿರುವ ರಿಯಾಲಿಟಿ ಶೋದಲ್ಲಿ ರಕ್ಷಕ್ ಅವರೂ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹಾಗೆ ನಡೆದುಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿಗೆ ಅವರು ಅವಮಾನ ಮಾಡಿದ್ದು, ಅವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ರಕ್ಷಕ್ ಹೇಳಿಕೆ ಖಂಡಿಸಲಾಗುವುದು’ ಎಂದು ಜಯನಗರ ಒಂದನೇ ಬ್ಲಾಕ್‌ನ ನಿವಾಸಿ ಬಿ.ಎಸ್.ಮಹೇಶ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
‘ನಟ ರಕ್ಷಕ್ ‘ಬುಲೆಟ್’, ಜೀ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಭರ್ಜರಿ ಬ್ಯಾಚುಲರ್ಸ್–2’ ಕಾರ್ಯಕ್ರಮದ ನಿರ್ದೇಶಕ ಹಾಗೂ ಬರಹಗಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದೂ ಅವರು ದೂರಿನಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.