ADVERTISEMENT

ಭುವನೇಶ್ವರಿ ಭಾವಚಿತ್ರಕ್ಕೆ ಅವಮಾನ: ದೂರು

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 20:10 IST
Last Updated 1 ನವೆಂಬರ್ 2022, 20:10 IST
ಮಹೇಶ ಜೋಶಿ
ಮಹೇಶ ಜೋಶಿ   

ಬೆಂಗಳೂರು: ‘ಬಾರ್ ಮತ್ತು ವೈನ್ ಮಳಿಗೆಗಳಲ್ಲಿ ಭುವನೇಶ್ವರಿಯ ಭಾವ ಚಿತ್ರಗಳನ್ನು ಅಬಕಾರಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಹೆಸರಿನಲ್ಲಿ ಮಾರಾಟ ಮಾಡು ತ್ತಿರುವುದು ಗಮನಕ್ಕೆ ಬಂದಿದೆ. ಈ ಕೃತ್ಯ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆಬೆಂಗಳೂರು ಪೊಲೀಸ್ ಆಯು ಕ್ತರಿಗೆ ದೂರು ನೀಡಲಾಗಿದೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿ ದ್ದಾರೆ.

‘ಚಿತ್ರಕಲಾವಿದ ಬಿ.ಕೆ.ಎಸ್. ಶರ್ಮಾ ಅವರು ಚಿತ್ರಿಸಿದ ತಾಯಿ ಭುವನೇಶ್ವರಿಯ ಭಾವಚಿತ್ರವನ್ನು ಕನ್ನಡಿಗರ ಒತ್ತಾಸೆಯಂತೆ ಮಾರಾಟಕ್ಕೆ ಇರಿಸಲಾಗಿದೆ. ಅಂತರ್ಜಾಲ ತಾಣಗಳಲ್ಲಿ ಎಲ್ಲರ ಕೈಗೆಟಕುವ ರೀತಿಯಲ್ಲಿ ಲಭ್ಯವಿದೆ. ಇದನ್ನು ಕೆಲವರು ಡೌನ್ಲೋಡ್ ಮಾಡಿ, ಹಂಚಿದ್ದಾರೆ. ಕೆಲವು ಸಮಾಜ ಘಾತುಕರು ಕನ್ನಡದ ಹೆಸರಿನಲ್ಲಿ ಭುವನೇಶ್ವರಿಯ ಭಾವಚಿತ್ರಗಳನ್ನು ಬಾರ್‌ಗಳಿಗೆ ಮಾರಾಟ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ಈ ಬಗ್ಗೆ ಅಬಕಾರಿ ಆಯುಕ್ತರಿಗೂ ಕಸಾಪ ದೂರು ನೀಡಿದೆ. ಇಂಥ ಅಸಂಬದ್ಧ ವ್ಯಕ್ತಿಗಳು ಯಾರೇ ಆದರೂ ಅವರ ವಿರುದ್ಧ ಕ್ರಮ ನಡೆಯಲೇಬೇಕು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.