ADVERTISEMENT

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

​ಪ್ರಜಾವಾಣಿ ವಾರ್ತೆ
Published 23 ಜನವರಿ 2023, 20:05 IST
Last Updated 23 ಜನವರಿ 2023, 20:05 IST
   

ಬೆಂಗಳೂರು: ಟೆಂಡರ್‌ ಶ್ಯೂರ್‌ ರಸ್ತೆ ಕಾಮಗಾರಿಗಳಲ್ಲಿ ಗುತ್ತಿಗೆದಾರರಿಗೆ ಶೇ 53.86ರಷ್ಟು ಹೆಚ್ಚುವರಿ ಮೊತ್ತ ಪಾವತಿಸಿ, ಅಕ್ರಮ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯಿಸಿ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಸೋಮವಾರ ದೂರು ಸಲ್ಲಿಸಲಾಗಿದೆ.

ದೂರು ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ನಾರಾಯಣಸ್ವಾಮಿ, ‘ಕಾಂಗ್ರೆಸ್‌ನವರು ನಮ್ಮ ಸರ್ಕಾರದ ವಿರುದ್ಧ ದಾಖಲೆಗಳಿಲ್ಲದೆ ಶೇಕಡ 40ರಷ್ಟು ಕಮಿಷನ್‌ ಆರೋಪ ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ವಿರುದ್ಧ ನಾವು ಲೋಕಾಯುಕ್ತಕ್ಕೆ ದಾಖಲೆ ಸಹಿತ ದೂರು ನೀಡಿದ್ದೇವೆ’ ಎಂದರು. ‘ಸಿದ್ದರಾಮಯ್ಯ ವಿರುದ್ಧದ ಆರೋಪಕ್ಕೆ ‍ಪುಷ್ಟಿ ನೀಡುವ 10–12 ದಾಖಲೆಗಳನ್ನು ದೂರಿನ ಜತೆ ನೀಡಿದ್ದೇವೆ. ದಾಖಲೆಗಳ ಆಧಾರದಲ್ಲಿ ಕ್ರಮ ಜರುಗಿಸುವುದಾಗಿ ಲೋಕಾಯುಕ್ತರು ಭರವಸೆ ನೀಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT