ADVERTISEMENT

ಬೆಂಗಳೂರು: ಬಯೋಗ್ಯಾಸ್‌ ಘಟಕಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2025, 17:58 IST
Last Updated 20 ಅಕ್ಟೋಬರ್ 2025, 17:58 IST
<div class="paragraphs"><p>ಡಿಕೆಶಿ </p></div>

ಡಿಕೆಶಿ

   

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಇ. ಸುಧೀಂದ್ರ ಅವರು ಕೋರಮಂಗಲದ ಮುನಿಸಿಪಲ್ ಸಾಲಿಡ್‌ ವೇಸ್ಟ್‌, ಹಸಿರು, ಆಹಾರ ಪದಾರ್ಥಗಳ ಸಂಸ್ಕರಣೆಯಿಂದ ಕಂಪ್ರೆಸ್ಡ್‌ ಬಯೋಗ್ಯಾಸ್‌ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದರು.

‘ಘಟಕದಲ್ಲಿ ತ್ಯಾಜ್ಯವನ್ನು ಸಂಗ್ರಹಿಸಿ, ವಿಂಗಡಿಸಿ, ಶೇಖರಣೆ ಮಾಡಿ ಸಂಸ್ಕರಿಸ
ಲಾಗುತ್ತದೆ. ಘನ, ದ್ರವ, ಆಹಾರ, ಹಸಿರು ತ್ಯಾಜ್ಯಗಳನ್ನು ವಿಂಗಡಿಸಿ, ನಿಗದಿತ ಸ್ಥಳಗಳಲ್ಲಿ ಶೇಖರಣೆ ಮಾಡಲಾ
ಗುತ್ತದೆ. ಘಟಕವನ್ನು ಜಿಬಿಎ ಹಾಗೂ ಕಾರ್ಬನ್ ಮಾಸ್ಟರ್‌ ಸಹಯೋಗದಲ್ಲಿ ನಿರ್ವಹಣೆ ಮಾಡಲಾಗುತ್ತದೆ’ ಎಂದು ಸುಧೀಂದ್ರ ಅವರು ಉಪ ಮುಖ್ಯಮಂತ್ರಿಗೆ ತಿಳಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.