ADVERTISEMENT

‘ಬೃಹತ್, ಸಣ್ಣ ಕೈಗಾರಿಕೋದ್ಯಮಿಗಳ ಸಮಾವೇಶ’

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 20:01 IST
Last Updated 24 ನವೆಂಬರ್ 2022, 20:01 IST

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಒಪ್ಪಂದ ಮಾಡಿಕೊಂಡಿರುವ ಬೃಹತ್ ಕೈಗಾರಿಕೆಗಳಿಗೆ ಅಗತ್ಯವಾದ ಬಿಡಿ ಭಾಗಗಳ ಪೂರೈಕೆಗೆ ಪೂರಕವಾಗಿ, ಜನವರಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಮತ್ತು ಸಣ್ಣ ಕೈಗಾರಿಕೋದ್ಯಮಿಗಳ ಸಮಾವೇಶ ಆಯೋಜಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆ ಗುರುವಾರ ನಡೆಸಿದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಈ ವಿಷಯ ತಿಳಿಸಿದರು.

‘ಜಾಗತಿಕ ಬಂಡವಾಳ ಹೂಡಿಕೆ ದಾರರ ಸಮಾವೇಶದಲ್ಲಿ ರಾಜ್ಯದಲ್ಲಿ ₹ 9.81 ಲಕ್ಷ ಕೋಟಿ ಹೂಡಿಕೆಯ ಒಪ್ಪಂದ ಮಾಡಿಕೊಂಡಿ ರುವ ಬೃಹತ್ ಉದ್ದಿಮೆಗಳಿಗೆ ಭಾರಿ ಪ್ರಮಾಣದಲ್ಲಿ ಬಿಡಿಭಾಗಗಳ ಅಗತ್ಯವಿದೆ. ಅದಕ್ಕಾಗಿ ಮತ್ತಷ್ಟು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಸ್ಥಾಪನೆ ಆಗಬೇಕಿದೆ. ಈ ಕಾರಣಕ್ಕೆ ಬೃಹತ್ ಮತ್ತು ಸಣ್ಣ ಉದ್ದಿಮೆದಾರರನ್ನು ಒಂದೆಡೆ ಸೇರಿಸಿ ಸಮಾವೇಶ ನಡೆಸಲಾಗುವುದು’ ಎಂದರು.

ADVERTISEMENT

‘ನೆಲಮಂಗಲ ಕೈಗಾರಿಕಾ ವಸಾಹತು ವಿಗೆ ನಾಲ್ಕು ಪಥದ ರಸ್ತೆ ನಿರ್ಮಾಣ, ವಿದ್ಯುತ್ ಸಬ್ ಸ್ಟೇಷನ್ ಹಾಗೂ ತ್ಯಾಜ್ಯ ಸಂಸ್ಕರಣಾ ಘಟಕ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದರು.

ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕೆಎಸ್ಎಸ್ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಜೆ. ಸೋಮಶೇಖರ್, ಕಾಸಿಯಾ ಅಧ್ಯಕ್ಷ ಕೆ.ಎನ್. ನರಸಿಂಹ ಮೂರ್ತಿ, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಎಚ್. ಮಂಜುನಾಥ್ ಹಾಗೂ ಕೈಗಾರಿಕೆ, ಲೋಕೋಪಯೋಗಿ, ವಿದ್ಯುತ್, ಗೃಹ ಮಂಡಳಿ ಹಿರಿಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.