
ಪ್ರಜಾವಾಣಿ ವಾರ್ತೆಸಿ.ಜೆ.ರಾಯ್
ಬೆಂಗಳೂರು: ಇಲ್ಲಿನ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿ ಇರುವ ಫ್ಲ್ಯಾಟ್‌ನಲ್ಲಿ ಕಾನ್ಫಿಡೆಂಟ್ ಗ್ರೂಪ್ ಸಿಇಒ ಸಿ.ಜೆ.ರಾಯ್ ಅವರು ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಕೇಂದ್ರ ವಿಭಾಗದ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಪದೇ ಪದೇ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಕಾನ್ಫಿಡೆಂಟ್ ಗ್ರೂಪ್‌ನ ಆದಾಯ ತೆರಿಗೆ ಸಲ್ಲಿಕೆಗಳಿಗೆ ಸಂಬಂಧಿಸಿದಂತೆ ಕಚೇರಿಯಲ್ಲಿ, ಶುಕ್ರವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದರು. ಆ ವೇಳೆಯೇ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.