ಚಕ್ರವರ್ತಿ ಸೂಲಿಬೆಲೆ
ಬೆಂಗಳೂರು: ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಕಾಂಗ್ರೆಸ್ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ನೀಡಿರುವ ದೂರನ್ನು ಸ್ವೀಕರಿಸಿರುವ ಪೊಲೀಸರು ಸ್ವೀಕೃತಿ ಪತ್ರ ನೀಡಿದ್ದಾರೆ.
ಪಾಕಿಸ್ತಾನದಲ್ಲಿದ್ದ ಉಗ್ರರ ಅಡಗು ತಾಣಗಳನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಪ್ರಚಾರ ಪಡೆಯುವ ಚಕ್ರವರ್ತಿ ಸೂಲಿಬೆಲೆ ಅವರು ಭಾರತದ ಸೈನಿಕರ ಆತ್ಮಸ್ಥೈರ್ಯವನ್ನು ಕುಗ್ಗಿಸುವಂತಹ ಹೇಳಿಕೆ ನೀಡುತ್ತಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ, ಭಾರತ– ಪಾಕಿಸ್ತಾನದ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಸುಳ್ಳು ಮಾಹಿತಿ ಹರಿಬಿಡುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನೋಹರ್ ಅವರು ದೂರಿನಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.