ADVERTISEMENT

ಮತದಾರರು ಕಾಂಗ್ರೆಸ್ ಅನ್ನು ಕಿತ್ತೊಗೆಯಲಿದ್ದಾರೆ: ನಿಖಿಲ್ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 20:22 IST
Last Updated 6 ಆಗಸ್ಟ್ 2025, 20:22 IST
ನಿಖಿಲ್ ಅವರನ್ನು ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು
ನಿಖಿಲ್ ಅವರನ್ನು ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು   

ಪ್ರಜಾವಾಣಿ ವಾರ್ತೆ

ನೆಲಮಂಗಲ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು.

ADVERTISEMENT

‘ಕಳೆದ ಲೋಕಸಭಾ ಚುನಾವಣೆಯಲ್ಲಿ 151 ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಇದು ನಮ್ಮ ಗೆಲುವಿಗೆ ದಿಕ್ಸೂಚಿಯಾಗಿದೆ. ಆದ್ದರಿಂದ ಯಾರೂ ಹತಾಶರಾಗದೆ ಇಂದಿನಿಂದಲೇ ಸಂಘಟನೆಯಲ್ಲಿ ಕಾರ್ಯಪ್ರವೃತ್ತರಾಗಿ’ ಎಂದರು.

‘ಬೆಂಗಳೂರಿನ ಕೊಳಚೆ ನೀರನ್ನು ವೃಷಭಾವತಿ ಯೋಜನೆ ಮೂಲಕ ಕೆರೆಗಳಿಗೆ ತುಂಬಿಸುವ ಯೋಜನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಇದರ ವಿರುದ್ಧ ಹೋರಾಟ ರೂಪಿಸುತ್ತೇವೆ’ ಎಂದರು.

ಇದೇ ವೇಳೆ ನಗರಸಭೆ ವ್ಯಾಪ್ತಿಯ ಯುವ ಘಟಕದ ಅಧ್ಯಕ್ಷರಾಗಿ ವಿಷ್ಣು, ವಕ್ತಾರರಾಗಿ ಕನಕರಾಜು, ತಾಲ್ಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಸಿ.ಪಾಲ್ಯಾತೀಥ ಅವರನ್ನು ನೇಮಿಸಿ, ನೇಮಕಾತಿ ಪತ್ರ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಚೌಡೇಶ್ವರಿ ದೇವಸ್ಥಾನದಿಂದ ವೇದಿಕೆವರೆಗೆ ಬೈಕ್ ರ‍್ಯಾಲಿ ಮೂಲಕ ನಿಖಿಲ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ  ಮಾಡಲಾಯಿತು.

ಮಾಜಿ ಶಾಸಕರಾದ ಕೆ.ಶ್ರೀನಿವಾಸಮೂರ್ತಿ, ಎ.ಮಂಜು, ಇ.ಕೃಷ್ಣಪ್ಪ, ಬಮೂಲ್ ನಿರ್ದೇಶಕ ಭವಾನಿ ಶಂಕರ್ ಬೈರೇಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಟಿ.ತಿಮ್ಮರಾಯಪ್ಪ, ನಗರಸಭೆ ಸದಸ್ಯ ಆಂಜನಮೂರ್ತಿ ಪಾಪಣ್ಣಿ, ಮುಖಂಡಾದ ಎಸ್.ಎಂಟಿ ಪ್ರಕಾಶ್, ಎಸ್.ಮಂಜುನಾಥ್, ಸುರೇಂದ್ರ ಇದ್ದರು.

ನಿಖಿಲ್ ಅವರನ್ನು ಮೆರವಣಿಗೆ ಮೂಲಕ ಕರೆತರಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.