
ಆರ್. ಅಶೋಕ
ಬೆಂಗಳೂರು: ‘ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅದರ ಭಾಗವಾಗಿಯೇ ದೇವರಾಜೇಗೌಡ ಬಂಧನವಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದರು.
ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಬಿಜೆಪಿ ಮುಖಂಡರಾದ ವಕೀಲ ದೇವರಾಜೇಗೌಡ ಅವರು ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷ್ಯಗಳನ್ನು ಸಿಬಿಐಗೆ ನೀಡುವುದಾಗಿ ಹೇಳಿದ್ದರು. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾತ್ರವಿರುವುದು ಬಹಿರಂಗವಾಗದಂತೆ ತಡೆಯಲು ದೇವರಾಜೇಗೌಡ ಅವರನ್ನು ಬಂಧಿಸಲಾಗಿದೆ’ ಎಂದು ದೂರಿದರು.
‘ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಬೆದರಿಕೆ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸರ್ಕಾರದ ಧೋರಣೆ ಹೀಗೆಯೇ ಮುಂದುವರಿದರೆ ನಾವು ಸುಮ್ಮನಿರುವುದಿಲ್ಲ. ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.