ಬೆಂಗಳೂರು: ಫೋಟೊ ಹಾಗೂ ಮೊಬೈಲ್ ಸಂದೇಶಗಳನ್ನು ಇಟ್ಟುಕೊಂಡು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಅಡಿ ಕಾಂಗ್ರೆಸ್ ಮುಖಂಡ ಧನಂಜಯ್ ಅವರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಲಗ್ಗೆರೆಯ ಕೆಂಪೇಗೌಡ ಲೇಔಟ್ ನಿವಾಸಿ ಯಶೋಧಾ ಸಿದ್ದೇಗೌಡ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
‘ನಿಮ್ಮ ಮನೆಯವರ ವಿಡಿಯೊಗಳು ನನ್ನ ಬಳಿ ಇವೆ. ಅವರು ಬೇರೆ ಮಹಿಳೆಯವರಿಗೆ ಸಂದೇಶ ಕಳುಹಿಸಿರುವ ಸ್ಕ್ರೀನ್‌ಶಾಟ್‌ಗಳು ಇವೆ. ನಿಮ್ಮ ಯಜಮಾನರು ಚುನಾವಣೆಗೆ ನಿಂತರೆ ವಿಡಿಯೊಗಳನ್ನು ಬಿಡುಗಡೆ ಮಾಡುತ್ತೇನೆಂದು ಹಲವು ಬಾರಿ ಹೇಳಿದ್ದಾರೆ. ಬೆದರಿಸಿ ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ನನ್ನ ಮೊಬೈಲ್‌ಗೆ ಕೆಲ ಮೆಸೇಜ್‌ಗಳನ್ನು ಕಳುಹಿಸಿ ಡಿಲಿಟ್ ಮಾಡಿದ್ದಾರೆ’ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕೃಷ್ಣ ಭವನಕ್ಕೆ ಸಾಗುವ ರಸ್ತೆಯಲ್ಲಿ ಅಡ್ಡಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಕ್ಕಳನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.