ADVERTISEMENT

ಕಾಂಗ್ರೆಸ್‌ ಭವನದ ಎದುರು ‘ಕೈ’ ನಾಯಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 19:29 IST
Last Updated 6 ಅಕ್ಟೋಬರ್ 2020, 19:29 IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ಸಿಬಿಐ ದಾಳಿ ಮತ್ತು ಉತ್ತರ ಪ್ರದೇಶದಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದ ಎದುರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ, ಐಟಿ, ಇಡಿಯಿಂದ ದಾಳಿ ಮಾಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಪ್ರತಿಭಟನೆಕಾರರು ಆರೋಪಿಸಿದರು. ‘ಇದಕ್ಕೆಲ್ಲ ನಾವು ಹೆದರುವುದಿಲ್ಲ’ ಎಂದೂ ಆಕ್ರೋಶ ಹೊರಹಾಕಿದರು.

ಧರಣಿ ವೇಳೆ, ‘ತೊಲಗಲಿ, ತೊಲಗಲಿ ಬಿಜೆಪಿ ಸರ್ಕಾರ ತೊಲಗಲಿ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರಾದ ಕೃಷ್ಣ ಬೈರೇಗೌಡ, ರಾಮಲಿಂಗಾ ರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಪ್ರಕಾಶ್ ರಾಥೋಡ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಭಾಗವಹಿಸಿದ್ದರು.

ADVERTISEMENT

ಇನ್ನೊಂದೆಡೆ ಶಿವಕುಮಾರ್ ಮನೆ ಮುಂದೆಯೂ ನೂರಾರು ಯುವ ಕಾಂಗ್ರೆಸ್‌ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.