ADVERTISEMENT

ಈಶ್ವರಪ್ಪ ವಜಾ: ರಾಜಭವನಕ್ಕೆ ‘ಕೈ’ ನಾಯಕರ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2022, 10:41 IST
Last Updated 22 ಫೆಬ್ರುವರಿ 2022, 10:41 IST
ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ
ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ   

ಬೆಂಗಳೂರು: ‘ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಕಾಂಗ್ರೆಸ್ ಶಾಸಕರು ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ಶಾಸಕರಾದ ಜಿ. ಪರಮೇಶ್ವರ, ಎಚ್.ಕೆ. ಪಾಟೀಲ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.