
ಬೆಂಗಳೂರು: ‘ಕ್ಲಬ್‌ಗಳಲ್ಲಿನ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಸದನ ಸಮಿತಿ ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬೇಕು’ ಎಂದು ವಿಧಾನ ಪರಿಷತ್‌ನ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಅವರು ಒತ್ತಾಯಿಸಿದ್ದಾರೆ.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದಿರುವ ಅವರು, ಸದನ ಸಮಿತಿ ವರದಿ ಅನುಷ್ಠಾನಗೊಳಿಸಲು ಕಾಯ್ದೆ ಜಾರಿಗೊಳಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
14ನೇ ವಿಧಾನಸಭೆ ವೇಳೆ ರಚನೆಯಾಗಿದ್ದ ಸದನ ಸಮಿತಿಯು 180 ಪುಟಗಳ ಸಮಗ್ರ ವರದಿಯನ್ನು ಸಭಾಧ್ಯಕ್ಷರಿಗೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿನ ಕ್ಲಬ್‌ಗಳಲ್ಲಿ ನಡೆಯುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಬೈಲಾ ಉಲ್ಲಂಘನೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿರುವ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವರದಿ ನೀಡಿ ಎಂಟು ವರ್ಷವಾದರೂ ಅದರ ಅನುಷ್ಠಾನವಾಗಿಲ್ಲ. ರಾಜ್ಯದ ಹಿತರಕ್ಷಣೆ ಮತ್ತು ಕ್ಲಬ್‌ಗಳು ಪಾರದರ್ಶಕವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ವರದಿಯನ್ನು ಜಾರಿಗೊಳಿಸಬೇಕು. ಇದರಿಂದ ಸರ್ಕಾರಕ್ಕೂ ಅಧಿಕ ಆದಾಯ ಬರಲಿದೆ ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.