ADVERTISEMENT

ರಮೇಶ ಜಾರಕಿಹೊಳಿ ಮುಖವಾಡದ ವ್ಯಕ್ತಿ ಹೊತ್ತು ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 19:54 IST
Last Updated 29 ಮಾರ್ಚ್ 2021, 19:54 IST
ಬೆಂಗಳೂರು ಕೇಂದ್ರ ದಕ್ಷಿಣ-ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಹಾಗೂ ನ್ಯಾಯಾಂಗದ ಮೊರೆಹೋದ 6 ಸಚಿವರಗಳ ರಾಜೀನಾಮೆಗೆ ಒತ್ತಾಯಿಸಿ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ಮಾಡಿದರು. ಪ್ರಜಾವಾಣಿ ಚಿತ್ರ : ಅನೂಪ್ ರಾಘ್.ಟಿ.

ಬೆಂಗಳೂರು: ‘ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಬೇಕು’ ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು ನಗರ ಪ್ರಚಾರ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ಕಚೇರಿಯಿಂದ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆಯವರೆಗೆ ಕಾರ್ಯಕರ್ತರು, ಪ್ರತಿಭಟನಾ ಮೆರವಣಿಗೆ ನಡೆಸಿದರು. ರಮೇಶ ಜಾರಕಿಹೊಳಿ ಅವರ ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಹೊತ್ತು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮುಖವಾಡವನ್ನೂ ಧರಿಸಿ ಘೋಷಣೆ ಕೂಗಿದರು.

‘ಕೆಲಸ ಕೊಡಿಸುವುದಾಗಿ ಹೇಳಿ ಅಮಾಯಕ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ರಮೇಶ ಜಾರಕಿಹೊಳಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತ ಸಿ.ಡಿ ಹಾಗೂ ವಿಡಿಯೊಗಳನ್ನು ರಾಜ್ಯದ ಜನತೆ ನೋಡಿದ್ದಾರೆ. ಇಷ್ಟಾದರೂ ರಮೇಶ ಜಾರಕಿಹೊಳಿ, ಅಧಿಕಾರ ಹಾಗೂ ಪ್ರಭಾವ ಬಳಸಿಕೊಂಡು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ರಾಜ್ಯ ಸರ್ಕಾರ ಹಾಗೂ ಎಸ್‌ಐಟಿ, ಆರೋಪಿ ಪರವೇ ಕೆಲಸ ಮಾಡುತ್ತಿದೆ’ ಎಂದೂ ಪ್ರತಿಭಟನಕಾರರು ದೂರಿದರು.

ADVERTISEMENT

‘ತಮ್ಮ ಮೇಲಿನ ಆರೋಪವನ್ನು ಮರೆಮಾಚಲು ಕಾಂಗ್ರೆಸ್‌ ನಾಯಕರ ಬಗ್ಗೆ ರಮೇಶ ಜಾರಕಿಹೊಳಿ ಅಶ್ಲೀಲ ಪದಗಳನ್ನು ಬಳಸಿದ್ದಾರೆ. ಇವರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ, ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.