ADVERTISEMENT

ಮೋದಿ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಮೇ 2019, 20:01 IST
Last Updated 6 ಮೇ 2019, 20:01 IST
ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿ ಸದಸ್ಯರು ಆನಂದರಾವ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು
ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿ ಸದಸ್ಯರು ಆನಂದರಾವ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು   

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ಖಂಡಿಸಿ ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿ ಸದಸ್ಯರು ಆನಂದರಾವ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ರಾಜೀವ್‌ಗಾಂಧಿ ವಿರುದ್ಧ ಮೋದಿ ನೀಡಿರುವ ಹೇಳಿಕೆ ಸುಳ್ಳಿನಿಂದ ಕೂಡಿದೆ. ಅವರುದೇಶಕ್ಕೆ ಮಾದರಿ. ರಾಜೀವ್‌ಗಾಂಧಿ ಬಗ್ಗೆ ಮಾತನಾಡಲು ಮೋದಿಗೆ ಯೋಗ್ಯತೆ ಇಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿ
ಸಿದರು.‌

ಮೋದಿಗೆ ಲೋಕಸಭ ಚುನಾವಣೆಯಲ್ಲಿ ಸೋಲುವ ಭೀತಿ ಎದುರಾಗಿದೆ. ಆದ್ದರಿಂದಲೇ ಈ ರೀತಿ ಮಾತನಾಡುತ್ತಿದ್ದಾರೆ. ರಫೇಲ್‌ ಹಗರಣದಲ್ಲಿ ಹಗಲು ದರೋಡೆ ನಡೆಸಿ, ಅಂಬಾನಿ ಕುಟುಂಬಕ್ಕೆ ಸಹಕಾರ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.