ADVERTISEMENT

ಬಿಜೆಪಿಯಿಂದ ಜನವಿರೋಧಿ ನೀತಿ; ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 15:35 IST
Last Updated 19 ಡಿಸೆಂಬರ್ 2020, 15:35 IST
ಅಡುಗೆ ಅನಿಲ ಮೇಲಿನ ಸಬ್ಸಿಡಿ ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ
ಅಡುಗೆ ಅನಿಲ ಮೇಲಿನ ಸಬ್ಸಿಡಿ ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಜನವಿರೋಧಿ ನೀತಿ ಅನುಸರಿಸುವ ಮೂಲಕ ಜನಸಾಮಾನ್ಯರ ಮೇಲೆ ಬರೆ ಎಳೆಯುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಸೇರಿದ್ದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಕೇಂದ್ರ ಸರ್ಕಾರ, ಅದರ ಮೇಲಿನ ಸಬ್ಸಿಡಿಯನ್ನೂ ಕಡಿತಗೊಳಿಸಿದೆ. ಹೆಚ್ಚುವರಿ ಹಣವನ್ನು ಗ್ರಾಹಕರಿಂದ ವಸೂಲಿ ಮಾಡಿ ಜನರ ಮೇಲೆ ಆರ್ಥಿಕ ಹೊರೆ ಹಾಕುತ್ತಿದೆ’ ಎಂದು ಪ್ರತಿಭಟನಕಾರರು ದೂರಿದರು.

ADVERTISEMENT

‘ಪೆಟ್ರೋಲ್ ಹಾಗೂ ಡೀಸೆಲ್ ದರವೂ ಏರಿಕೆ ಆಗುತ್ತಿದ್ದು, ವಾಹನ ಸವಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತೈಲ ದರ ಇಳಿಕೆ ಮಾಡಲು ಕೇಂದ್ರ ಸರ್ಕಾರ ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ’ ಎಂದೂ ಹೇಳಿದರು.

‘ರೈತ ವಿರೋಧಿ ಕಾಯ್ದೆಗಳನ್ನು ಖಂಡಿಸಿ ದೆಹಲಿಯಲ್ಲಿ ಅನ್ನದಾತರು, ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವುದೇ ಗಮನ ಹರಿಸಿಲ್ಲ. ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಇದರ ವಿರುದ್ಧ ನಮ್ಮ ಹೋರಾಟ ನಿರಂತರ’ ಎಂದೂ ಪ್ರತಿಭಟನಕಾರರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.