ADVERTISEMENT

ರಾಜ್ಯದ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ಇಂದು

ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಗ್ರಾ.ಪಂ.ಗೆ ನಾಮನಿರ್ದೇಶನಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 19 ಮೇ 2020, 20:14 IST
Last Updated 19 ಮೇ 2020, 20:14 IST

ಬೆಂಗಳೂರು: ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ಸೇರಿದಂತೆ ರಾಜ್ಯ ಸರ್ಕಾರದ ನಿರ್ಧಾರಗಳನ್ನು ವಿರೋಧಿಸಿ ಬುಧವಾರ (ಮೇ 20) ಸಾಂಕೇತಿಕ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಇರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬಳಿಕ ರಾಜ್ಯ ಚುನಾವಣಾ ಆಯುಕ್ತರು ಮತ್ತು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ತಪ್ಪು ನಿರ್ಧಾರಗಳ ಬಗ್ಗೆಯೂ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳಲು ನಿರ್ಣಯಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.