ADVERTISEMENT

ಇಂದು ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ 'ಪೆಟ್ರೋಲ್ 100 ನಾಟೌಟ್' ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 9:36 IST
Last Updated 11 ಜೂನ್ 2021, 9:36 IST

ಬೆಂಗಳೂರು: ಕೇಂದ್ರ ಸರಕಾರ ನಿರಂತರವಾಗಿ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಗರದ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ ಕೇಂದ್ರ ಸರ್ಕಾರದ ವಿರುದ್ಧ, 'ಪೆಟ್ರೋಲ್ 100 ನಾಟೌಟ್', 'ಪೆಟ್ರೋಲ್ ಪಿಕ್‌ಪಾಕೆಟ್' ಪ್ರತಿಭಟನೆ ನಡೆಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.