ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಜನರ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಶ್ರೀರಾಮಮಂದಿನ ಆಟದ ಮೈದಾನದಿಂದ ರಾಜಾಜಿನಗರದ ಆರ್.ಟಿ.ಒ.ಸಂಕೀರ್ಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾಮಲಿಂಗಾರೆಡ್ಡಿ,‘ಕೇಂದ್ರ ಸರ್ಕಾರ ದಿನೇ ದಿನೇ ದರ ಏರಿಸುವ ಮೂಲಕ ಬಡವರು ಹಾಗೂ ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ’ ಎಂದು ದೂರಿದರು.
ಮಾಜಿ ಮೇಯರ್ ಜಿ.ಪದ್ಮಾವತಿ, ‘ಈಗ ತೈಲದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದರಿಂದ ಹಲವಾರು ಸಮಸ್ಯೆಗಳು ಉದ್ಭವಿಸಲಿವೆ. ಕೊರೊನಾ ಹೊಡೆತದಿಂದ ಅನೇಕರು ಉದ್ಯೋಗ ಕಳೆದುಕೊಂಡು ದಿಕ್ಕು ತೋಚದೆ ಕೂತಿದ್ದಾರೆ. ದರ ಏರಿಕೆಯು ಜನರನ್ನು ಮಾನಸಿಕ ಒತ್ತಡಕ್ಕೆ ತಳ್ಳಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.