ರಾಜರಾಜೇಶ್ವರಿ ನಗರ: ಅಗತ್ಯ ವಸ್ತುಗಳ ಬೆಲೆ ಏರಿಕೆ, ಮತಕಳವು ಆರೋಪ ಸೇರಿದಂತೆ ಕೇಂದ್ರ ಸರ್ಕಾರದ ವಿರುದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಲಗ್ಗೆರೆ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಸಹಿ ಸಂಗ್ರಹ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಮಾಗಡಿ ಮುಖ್ಯರಸ್ತೆಯ ಸುಮ್ಮನಹಳ್ಳಿ ಸರ್ಕಲ್‌ನಲ್ಲಿ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು. ಜನರಿಂದ ಸಹಿ ಸಂಗ್ರಹಿಸಲಾಯಿತು.
ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹನುಮಂತರಾಯಪ್ಪ ಮಾತನಾಡಿ, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಕಲಿ ಮತದಾರರನ್ನು ಸೇರಿಸಿ, ದೇಶದ ಚುಕ್ಕಾಣೆ ಹಿಡಿದಿದೆ. ಕೇಂದ್ರ ಚುನಾವಣಾ ಆಯೋಗ ಬಿಜೆಪಿಯ ಕೈಗೊಂಬೆಯಾಗಿದೆ. ರಾಹುಲ್ ಗಾಂಧಿ ಅವರು ಮತಕಳವು ವಿರುದ್ದ ಸಹಿ ಸಂಗ್ರಹದ ಮೂಲಕ ಪ್ರತಿಭಟನೆ ನಡೆಸಲು ಸೂಚಿಸಿದ್ದು ಎಲ್ಲ ಬ್ಲಾಕ್ ಕಾಂಗ್ರೆಸ್ ಘಟಕಗಳ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದರು.
ಲಗ್ಗೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಜೀವಿತ್ ಮಂಜುನಾಥ್‌ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಎಲ್. ಪ್ರವೀಣ್ ಕುಮಾರ್ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.